Breaking News

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ

Spread the love

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ ಭುಗಿಲೆದ್ದಿದೆ.

ಎರಡು ಗುಂಪುಗಳ ನಡುವೆ ಗಲಾಟೆ

ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ಅಲೀಮ್ ಎಂಬ ಕಾಂಗ್ರೆಸ್ ಮುಖಂಡನ ಮಧ್ಯೆ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದೆ. ಕಾಂಗ್ರೆಸ್ ಮುಖಂಡ ಅಲೀಮ್ ಎಂಬುವವರಿಂದ ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್​ದಾರರಿಂದ ಅಕ್ಕಿ ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಆರೋಪಿಸಿದೆ. ಅಷ್ಟೇ ಅಲ್ಲದೆ KRS ಪಕ್ಷದ ಮುಖಂಡರು ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಪೊಲೀಸ್​ ಠಾಣೆಗೆ ಕರೆತಂದಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ