Breaking News

ಡಿಕೆ ಶಿ ಪಿಎಸ್ ಕಾರು ಅಪಘಾತ: ಹೆಬ್ಬಾಳ್ಕರ್ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ಬೈಕ್​ ಸವಾರ ಸಾವು

Spread the love

ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್​ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ.

ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು.

ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಧಾರವಾಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.​ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ