ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ
ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ಚಂದ್ರಯ್ಯಾ ಬಸಲಿಂಗಯ್ಯಾ ಮಠಪತಿ ವಯಸ್ಸು (65)
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಟ್ರ್ಯಾಕ್ಟರ್ ಮೂಲಕ ಜಮೀನು ಹೋಲುತಿದ್ದ ಸಂದರ್ಭದಲ್ಲಿ ಅಚಾನಕ್ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರೈತನು ಚಕ್ರದ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದ ರೈತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪ್ರತೀಕ್ಷಿತ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಮೃತ ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Laxmi News 24×7