Breaking News

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ

Spread the love

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು.

ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ‌ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಭಾರತ ಅಭಿಯಾನದ ಜೊತೆಯಾಗಿ ಇಂದು ನೀವು ಮಗುವಿಗೆ ಹಾಕಿಸುವ ಎರಡು ಹನಿ‌ ಲಸಿಕೆ, ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸಲಿದೆ ಎಂದರು.

PULSE POLIO VACCINATION

ಅಂದಾಜು 62.40 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ಬಸ್, ರೈಲ್ವೆ ಸ್ಟೇಷನ್ ಮುಂತಾದ ಕಡೆಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ಹಾಕಲಾಗುವುದು. ಎಲ್ಲ ಸರ್ಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ನಡೆಸಲಾಗುವುದು. 0-5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಲೇ ಬೇಕು. ಮೊದಲು ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು.

ಡಿ.21 ಭಾನುವಾರದಂದು ಬೂತ್​​ಗಳಲ್ಲಿ ಪೋಲಿಯೋ ಲಸಿಕೆ ಹಾಕಿಸಲಾಗುವುದು‌. ಬಳಿಕ 2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 33,258 ಬೂತ್​ಗಳು, 1,030 ಸಂಚಾರಿ ತಂಡಗಳು, 1,096 ಟ್ರಾನ್ಸಿಟ್ ತಂಡಗಳು, 1,13,115 ಲಸಿಕಾ ಕಾರ್ಯಕರ್ತರು, 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. Nearby Vaccination centre Karnataka ಆ್ಯಪ್​ ಮೂಲಕ ಹತ್ತಿರದ ಲಸಿಕಾ ಕೇಂದ್ರ ಸಂಪರ್ಕಿಸಬಹುದಾಗಿದೆ.

ವಲಸೆ ಮಕ್ಕಳು, ಸ್ಲಂಗಳಲ್ಲಿರುವ ಮಕ್ಕಳಿಗೆ ಆದ್ಯತೆ ನೀಡಿ ಎರಡು ಹನಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಮಗು ಸಹ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗಿದೆ. ಕಳೆದ ಸಲ ಮಾರ್ಚ್‌ನಲ್ಲಿ ಶೇ.102ರಷ್ಟು ಗುರಿ ಸಾಧಿಸಲಾಗಿತ್ತು. ಈ ಬಾರಿ ನೂರರಷ್ಟು ಗುರಿ ಮುಟ್ಟುವ ನಿರೀಕ್ಷೆ ಇಡಲಾಗಿದೆ.‌


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ