Breaking News

ನನ್ನ ಮತ್ತು ಸಿದ್ದರಾಮಯ್ಯನವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದ ಡಿಸಿಎಂ

Spread the love

ಬೆಂಗಳೂರು: “ನನಗೆ ಕಾಂಗ್ರೆಸ್​ನ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, “ಅವರಿಗೆ ಸಿಎಂ ಆಪ್ತರೇನು?. ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ?. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್​ನವನು. ಅಂದು ಎಸ್​.ಎಂ.ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ?. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ” ಎಂದರು.

ಕೆ.ಎನ್​.ರಾಜಣ್ಣ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, “ನಾವು ಸಹೋದ್ಯೋಗಿಗಳು. ಅವರು ನಮ್ಮೊಂದಿಗೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿಸುತ್ತಿವೆ. ಅವರು ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ?. ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು ಯಾವ ಜಗಳ?” ಎಂದು ಹೇಳಿದರು.

“ಎಲ್ಲ ಕಾಂಗ್ರೆಸ್​​​ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗಿದ್ದೇವೆ. ನಾನಂತೂ ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು, ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ” ಎಂದು ಮರುಪ್ರಶ್ನಿಸಿದರು.

“ರಾಜಣ್ಣ ನಮ್ಮ ಶಾಸಕರು. ನಮ್ಮ ಜತೆ ಮಂತ್ರಿಯಾಗಿದ್ದವರು. ಸೌಹಾರ್ದಯುತ ಭೇಟಿ ಮಾಡುತ್ತೇವೆ. ಶನಿವಾರ ಸರಿಯಾಗಿ ಮಾತನಾಡಲು ಆಗಲಿಲ್ಲ. ಅದಕ್ಕೆ ಇಂದು (ಭಾನುವಾರ) ಭೇಟಿ ಮಾಡುತ್ತೇನೆ ಎಂದು ಹೇಳಿದ್ದೇನೆ. ರಾಜ್ಯಪಾಲರ ಕಾರ್ಯಕ್ರಮ ಇರುವ ಕಾರಣಕ್ಕೆ ಆ ನಂತರ ಭೇಟಿ ಮಾಡುತ್ತೇನೆ” ಎಂದು ತಿಳಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ