ಮಾಲ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್
ಬೆಂಗಳೂರಿನ ಮಾಲ್ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಗುವಾಹಟಿ ಮೂಲದ ಡೆಲಿವರಿ ಬಾಯ್ ಮನೂಜ್ ಚಾಂದ್ (27) ನನ್ನು ಪೊಲೀಸರು ಬಂಧಿಸಿದ್ದಾರೆ.
ಡಿ.25ರಂದು ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಬಳಿ ಹೋಗಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ.
ಯುವತಿ ನೀಡಿದ ದೂರಿನ ಮೇರೆಗೆ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Laxmi News 24×7