Breaking News

ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ

Spread the love

ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ
ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್​ನ 27ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಲಹೊಂಗಲ ಮೂಲದ ಸಂತೋಷ್(26) ನಿಧನಹೊಂದಿದ್ದಾನೆ.
ಅಪಘಾತದ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಮೃತ ಯುವಕ ಬೆಂಗಳೂರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಾರು ಚಾಲಕ ಅಬ್ದುಲ್ ರೆಹಮಾನ್​ನನ್ನು ಪೊಲೀಸರು ಬಂಧಿಸಿದ್ದಾರೆ.
ಪಾದಚಾರಿಗೆ ಕಾರು ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಹಿನ್ನೆಲೆ ರಕ್ತದ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.

Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ