ನಾಡಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾದ ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರತಿವರ್ಷ ಕೊಡಮಾಡುವ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಪ್ರೆಸ್‌ಕ್ಲಬ್ ಸದಸ್ಯರು ಬಹುಮತದ ಆಯ್ಕೆಯಂತೆ ವೈಚಾರಿಕ ಚಿಂತನೆಯ ವ್ಯಕ್ತಿತ್ವ ಹೊಂದಿರುವ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರನ್ನು ಪ್ರೆಸ್‌ಕ್ಲಬ್ ಆಫ್ ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಹಿಂದೆ ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ.ಸಿ.ಎನ್.ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಶ್ರೀ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಶ್ರೀ ಎನ್. ವೆಂಕಟಾಚಲಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್. ಮಂಜುನಾಥ್, ಅಂತರರಾಷ್ಟ್ರೀಯ ಕ್ರಿಕೆಟ್ ಪಟು ಶ್ರೀ ಅನಿಲ್ ಕುಂಬ್ಳೆ ರವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಿ, ಅವರನ್ನು ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಅಭಿನಂದಿಸಿದ್ದನ್ನು ಸ್ಮರಿಸಬಹುದು.
Laxmi News 24×7