Breaking News

ಒಮ್ಮೆ ಉದ್ಯಾನಕ್ಕೆ ಮೀಸಲಿಟ್ಟ ಜಾಗವನ್ನು ಸಂರಕ್ಷಣೆ ಮಾಡುವುದು ಜಿಲ್ಲಾಧಿಕಾರಿ, ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ: ಹೈಕೋರ್ಟ್

Spread the love

ಬೆಂಗಳೂರು : ಒಂದು ಬಾರಿ ಉದ್ಯಾನಕ್ಕಾಗಿ ಜಾಗ ಮೀಸಲಿಟ್ಟ ಬಳಿಕ ಅದನ್ನು ಸಂರಕ್ಷಣೆ ಮಾಡುವುದು ಜಿಲ್ಲಾಧಿಕಾರಿ ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರಲಿದೆ ಎಂದು ಹೈಕೋರ್ಟ್ ತಿಳಿಸಿದೆ.

ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ಗ್ರಾಮದಲ್ಲಿ ಉದ್ಯಾನಕ್ಕೆ ಮೀಸಲಿಟ್ಟ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಅನುಮತಿಸಿರುವ ಪಾಂಡವಪುರ ವಿಭಾಗಾಧಿಕಾರಿಯ ಕ್ರಮ ಆಕ್ಷೇಪಿಸಿ, ಅನುವಿಕಟ್ಟೆ ಗ್ರಾಮದ ನಿವಾಸಿಗಳಾದ ಸಿ. ಶ್ರೀನಿವಾಸ್ ಹಾಗೂ ಮತ್ತಿತರರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠ ಈ ಆದೇಶವನ್ನು ನೀಡಿದೆ. ಅಲ್ಲದೇ, ಅರ್ಜಿದಾರರು ಹೇಳುತ್ತಿರುವ ಸ್ಥಳ ಕೆ. ಆರ್. ಪೇಟೆ ಗ್ರಾಮದ ಸರ್ವೇ ನಂಬರ್ 244ರಲ್ಲಿನ 6 ಎಕರೆ 32 ಗುಂಟೆ ಜಾಗ ಉದ್ಯಾನಕ್ಕೆ ಮೀಸಲಿಡಲಾಗಿದೆ ಎಂಬುದು ಕಂದಾಯ ದಾಖಲೆಗಳಿಂದ ದೃಢಪಡುತ್ತದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 67 ಅಡಿಯಲ್ಲಿ ಉದ್ಯಾನ ಜಾಗವನ್ನು ಸಂರಕ್ಷಣೆ ಮಾಡುವುದು ಜಿಲ್ಲಾಧಿಕಾರಿಯ ಕರ್ತವ್ಯವಾಗಿದೆ.

ಕರ್ನಾಟಕ ಉದ್ಯಾನ, ಆಟದ ಮೈದಾನ ಮತ್ತು ಮುಕ್ತ ಪ್ರದೇಶಗಳ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ-1985 ಅಡಿಯಲ್ಲಿ ಉದ್ಯಾನ ಮತ್ತು ಮುಕ್ತ ಪ್ರದೇಶಗಳನ್ನು ಸಂರಕ್ಷಣೆ ಮಾಡುವುದು ಎಲ್ಲಾ ಸ್ಥಳೀಯ ಸಂಸ್ಥೆಗಳ ಕರ್ತವ್ಯ. ಅದರಂತೆ ಮಂಡ್ಯ ಜಿಲ್ಲಾಧಿಕಾರಿ ಮತ್ತು ಪಾಂಡವಪುರ ಉಪ ವಿಭಾಗಾಧಿಕಾರಿ, ಸರ್ವೇ 244ರಲ್ಲಿನ 6 ಎಕರೆ 32 ಗುಂಟೆ ಜಾಗವನ್ನು ಉದ್ಯಾನ ಅಭಿವೃದ್ಧಿಗೆ ಮೀಸಲಿಡಬೇಕು ಎಂಬ ಅರ್ಜಿದಾರರ ಮನವಿಯನ್ನು ಮೂರು ತಿಂಗಳಲ್ಲಿ ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ಪೀಠ ನಿರ್ದೇಶನ ನೀಡಿ ಆದೇಶಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ