Breaking News

ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಯುವಕನ ಹತ್ಯೆ

Spread the love

ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ವಿಚಾರವೇ ಯುವಕನ ಕೊಲೆಗೆ ಕಾರಣವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಮೂಲದ ಮಂಜುನಾಥ್ (28) ಮೃತ ಯುವಕ.

ಈ ಕುರಿತು ಅಡಿಷನಲ್ ಎಸ್ಪಿ ಜಯಕುಮಾರ್ ಅವರು ಮಾತನಾಡಿದ್ದು, ‘ಇಂದು ಬೆಳಗಿನ ಜಾವ ತರೀಕೆರೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಅದರಲ್ಲಿ ಕೋಟೆ ಮಂಜುನಾಥ್ ಎಂಬ ವ್ಯಕ್ತಿಗೆ ಆತನ ನಾಲ್ವರು ಸ್ನೇಹಿತರು ಅಡ್ಡಗಟ್ಟಿ ಚಾಕುವಿನಿಂದ ಇರಿದಿದ್ದಾರೆ ಎಂದು ವರದಿಯಾಗಿದೆ. ನಂತರ ಆ ವ್ಯಕ್ತಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂಬುದು ತಿಳಿದು ಹೋಗಿ ಪರಿಶೀಲನೆ ಮಾಡಿದಾಗ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಆ ವ್ಯಕ್ತಿಯ ಜೊತೆಗಿದ್ದ ಕೋಟೇಶ್ ಎಂಬ ವ್ಯಕ್ತಿಯಿಂದ ದೂರನ್ನು ಪಡೆದುಕೊಂಡಿದ್ದೇವೆ. ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದೇವೆ’ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ