Breaking News

ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ : ಸಲೀಂ ಅಹ್ಮದ್

Spread the love

ಹುಬ್ಬಳ್ಳಿ : ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಅಂತಿಮವಾಗಿ ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಲಕ್ಷ್ಮಣ ರೇಖೆ ದಾಟಬಾರದು ಎಂದು ತಾಕೀತು ಮಾಡಿದ್ದಾರೆ. ನಾನು ಅದಕ್ಕೆ ಬದ್ಧನಾಗಿದ್ದೇನೆ.‌ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿ ಪಕ್ಷದ ವರಿಷ್ಠರು ತೀರ್ಮಾನ ‌ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ‌ಪಕ್ಷದಲ್ಲಿ ಪ್ರಜಾಪ್ರಭುತ್ವವಿದೆ. ನಮ್ಮಲ್ಲಿ ಕಲೆಕ್ಟಿವ್ ಲೀಡರ್​ಶಿಪ್ ಇದೆ. ಹೈಕಮಾಂಡ್​ ನಿರ್ಧಾರವನ್ನು ಪ್ರತಿಯೊಬ್ಬ ಕಾರ್ಯಕರ್ತರು ಒಪ್ಪುತ್ತಾರೆ ಎಂದರು.

ಶೇ. 50ರಷ್ಟು ಮಂತ್ರಿಗಳಿಗೆ ಪಕ್ಷದ ಜವಾಬ್ದಾರಿ ಕೊಡಲಾಗುತ್ತದೆ. ಮುಂದಿನ ಚುನಾವಣೆಯಲ್ಲೂ‌ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತಾರೆ. ಉಳಿದಂತೆ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.‌ ಕಳೆದ 20 ವರ್ಷಗಳಿಂದ ಕಿತ್ತೂರು ಕರ್ನಾಟಕಕ್ಕೆ, ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಜಬ್ಬಾರ್​ಖಾನ್ ಹೊನ್ನಳ್ಳಿಯವರಿಗೆ ಮಾತ್ರ ಸಿಕ್ಕಿದೆ‌. ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋಗಿಲು ಲೇಔಟ್​ನಲ್ಲಿ ಸರ್ಕಾರ ಯಾವುದೇ ಸಮುದಾಯದ ಪರವಾಗಿ ಕೆಲಸ ಮಾಡಿಲ್ಲ. ಸಾರ್ವಜನಿಕ ಹಿತಾಸಕ್ತಿಯಂತೆ ಕೆಲಸ ಮಾಡುತ್ತಿದೆ. ಇದರಲ್ಲಿ ಅಲ್ಪ ಸಂಖ್ಯಾತರ ತುಷ್ಟೀಕರಣವಿಲ್ಲ. ಡ್ರಗ್ಸ್​ ಬಗ್ಗೆಯೂ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಇದರಲ್ಲಿ ಪೊಲೀಸರು ಶಾಮೀಲಾಗಿದ್ರೆ ಅವರ ಮೇಲೂ ಕ್ರಮವಾಗಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಜಾರಿಗೆ‌ ತಂದಿರುವ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವ ನಿಧಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿವೆ. ರಾಜ್ಯ ಸರ್ಕಾರ ‌ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗದವರಿಗೆ ತಲುಪುತ್ತಿವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಡಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ