Breaking News

ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ;

Spread the love

ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದ್ದೇನು?

ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆ ವೇಳೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಹಾಸನ ಮೂಲದ ನೌಶದ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಡೂರು ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.ಇನ್ನು ತಿಮ್ಮಣ್ಣ ಮತ್ತು ಸಂಜಯ್ ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆ, ಶಬ್ಬೀರ್ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ