ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ
ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ…
ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ
ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ…
ಮದ್ಯದ ಬಾಟಲ್ ಗಳಿಗೆ ಬೆಂಕಿ ಹಾಕಿ ಆಕ್ರೋಶ
ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯ
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಭಾವಿ ಗ್ರಾಮದಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ವಸತಿ ಪ್ರದೇಶದಲ್ಲಿ ಬಾರ್ ತಲೆಎತ್ತುತ್ತಿರುವುದನ್ನು ಖಂಡಿಸಿದ ನೂರಾರು ಮಹಿಳೆಯರು, ಮದ್ಯದ ಬಾಟಲಿಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ
ಬಾರ್ನಿಂದಾಗಿ ಗ್ರಾಮದ ಶಾಂತಿ ಕದಡುತ್ತದೆ ಮತ್ತು ಕುಡುಕರ ಹಾವಳಿಯಿಂದ ಮಹಿಳೆಯರು ಹಾಗೂ ಮಕ್ಕಳಿಗೆ ಓಡಾಡಲು ತೊಂದರೆಯಾಗುತ್ತದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಈ ಕುರಿತು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹಾಗೂ ಮಹಾಲಿಂಗಪೂರ ಪೊಲೀಸ್ ಠಾಣೆಗೆ ತೆರಳಿದ ಮಹಿಳೆಯರು, ಬಾರ್ ಸ್ಥಳಾಂತರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ಕೂಡಲೇ ಬಾರ್ ಅನ್ನು ಬೇರೆಡೆಗೆ ವರ್ಗಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಅಬಕಾರಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Laxmi News 24×7