ತುಮಕೂರು : ಬಳ್ಳಾರಿ ಗಲಾಟೆ ವಿಚಾರವಾಗಿ ಈಗಾಗಲೇ ನಾನು ಅಲ್ಲಿಗೆ ಲಾ ಅಂಡ್ ಆರ್ಡರ್ ಎಡಿಜಿಪಿ ಅವರನ್ನು ಕಳುಹಿಸಿದ್ದೇನೆ. ಈಗಲೂ ಅವರು ಸ್ಪಾಟ್ನಲ್ಲಿಯೇ ಇದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಫೈರ್ ಮಾಡಿದ ಬುಲೆಟ್ ಪೊಲೀಸರದ್ದು ಅಲ್ಲ ಅಂತ ತಿಳಿದುಬಂದಿದೆ. ಯಾವುದೇ ಪೊಲೀಸನವರ ಗನ್ಗಳಿಂದ ಫೈರ್ ಆಗಿಲ್ಲ. ಮೃತನ ದೇಹಕ್ಕೆ ಹೊಕ್ಕ ಬುಲೆಟ್ ಸಂಗ್ರಹ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ‘ಅದು ರೆಗ್ಯುಲರ್ ಪೊಲೀಸ್ ಬುಲೆಟ್ಗೆ ಮ್ಯಾಚ್ ಆಗ್ತಿಲ್ಲ. ಯಾರೋ ಖಾಸಗಿ ವ್ಯಕ್ತಿಗಳಿಂದ ಫೈರ್ ಆಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆ ಬುಲೆಟ್ ಅನ್ನ ಈಗ FSLಗೆ ಕಳುಹಿಸಿದ್ದಾರೆ. ಅಲ್ಲಿದ್ದಂತಹ ಎಲ್ಲಾ ರಿವಾಲ್ವಾರ್ ಅಥವಾ ಗನ್ಗಳನ್ನು ಸೀಜ್ ಮಾಡಿದ್ದಾರೆ. ಪರಿಶೀಲನೆ ಬಳಿಕ ಯಾರ ಬುಲೆಟ್ ಎಂದು ಗೊತ್ತಾಗಲಿದೆ. FSL ಎಕ್ಸ್ಫರ್ಟ್ಗಳು ಅದನ್ನು ಪತ್ತೆ ಹಚ್ಚುತ್ತಾರೆ. ಈಗ ಎರಡು ಕಡೆಯಿಂದಲೂ ದೂರು, ಪ್ರತಿದೂರು ಕೊಟ್ಟಿದ್ದಾರೆ’ ಎಂದರು.ಆ ದೂರು ಪಡೆದು ಎರಡು ಕಡೆ ಎಫ್ಐಆರ್ ದಾಖಲಾಗಿವೆ. ನೂರಾರು ಜನರ ಹೆಸರನ್ನು ದೂರಿನಲ್ಲಿ ಕೊಟ್ಟಿದ್ದಾರೆ. ಒಬ್ಬೊಬ್ಬರನ್ನು ತನಿಖೆ ಮಾಡಲಾಗ್ತಿದೆ. ಉನ್ನತ ಮಟ್ಟದಲ್ಲಿ ತನಿಖೆ ಆಗಬೇಕು ಅಂತ ಸಿಎಂ ಸೂಚನೆ ಕೊಟ್ಟಿದ್ದಾರೆ. ನಾನು ಕೂಡಾ ನಮ್ಮ ಅಧಿಕಾರಿಗಳಿಗೆ ಹೇಳಿದ್ದೇನೆ. ಈ ಮಧ್ಯೆ ರಾಜಕೀಯ ಮುಖಂಡರುಗಳು ಅಲ್ಲಿಗೆ ಹೋಗಿ ಹೇಳಿಕೆಗಳನ್ನು ಕೊಡ್ತಿದ್ದಾರೆ. ನಮಗೆ ರಾಜಕೀಯ ಮುಖಂಡರ ಹೇಳಿಕೆಗಿಂತ ಅಲ್ಲಿ ನಡೆದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಅದನ್ನು ಹೊರಗೆ ತರುತ್ತೇವೆ ಎಂದು ಹೇಳಿದ್ದಾರೆ.
Laxmi News 24×7