Breaking News

ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ

Spread the love

ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹಿಟ್ನಾಳ ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಂಕು ಸ್ಥಾಪನೆ ಮುಗಿಸಿ ಹೊರಡುವಾಗ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಸೋಮಣ್ಣ ಅವರನ್ನು ಸುತ್ತುವರಿದು ಆಕ್ರೋಶ ಹೊರಹಾಕಿದ ಘಟನೆ ಜರುಗಿದೆ.

ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರುಗಳನ್ನು ನಮೂದಿಸಿಲ್ಲ. ಇದು ಜನಪ್ರತಿನಿಧಿಗಳಿಗೆ ಮಾಡಿದ ಅವಮಾನ ಎಂದು ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ