Breaking News

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Spread the love

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿತವಾಗಿರುವ ಘಟನೆ ನಗರದ ಕ್ಲಬ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಚಾಕು ಇರಿತಕ್ಕೆ ಒಳಗಾದವರು. ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ.

ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಬಸವಂತ ಅವರ ಮೇಲೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದಾರೆ.‌ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾರೆ.

ಗಾಯಗೊಂಡ ಬಸವಂತ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಮೃಣಾಲ್ ಹೆಬ್ಬಾಳ್ಕರ್ ದೌಡಾಯಿಸಿದ್ದಾರೆ.‌ ಇನ್ನು ಡಿಸಿಪಿ ನಾರಾಯಣ ಬರಮನಿ ಕೂಡ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಹಲ್ಲೆಗೆ ಹಣಕಾಸು ವ್ಯವಹಾರ ಕಾರಣ ಎಂಬುದು ಪ್ರಾಥಮಿಕ‌ ಮಾಹಿತಿಯಿಂದ ತಿಳಿದು ಬಂದಿದ್ದು, ನಿಖರ ಕಾರಣ ಪೊಲೀಸರ ತನಿಖೆಯಿಂದಲೇ ಗೊತ್ತಾಗಬೇಕಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ