Breaking News

ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ

Spread the love

ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್​ ಅವರ ಮೃತದೇಹವನ್ನು ಕುಟುಂಬಸ್ಥರ ವಿರೋಧದ ನಡುವೆ ಯಾರದ್ದೋ ಒತ್ತಾಯಕ್ಕೆ ಮಣಿದು ದಹನ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀ ರಾಮುಲು ಗಂಭೀರ ಆರೋಪ ಮಾಡಿದ್ದಾರೆ.

ಗಲಾಟೆ ಪ್ರಕರಣ ಸಂಬಂಧ ಇಂದು ಬಳ್ಳಾರಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ, ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳ ಸುರಿಮಳೆಗೈದಿದ್ದಾರೆ.

ಬಳ್ಳಾರಿ ಘಟನೆ ಆಕಸ್ಮಿಕವಲ್ಲ, ಇದು ಪೂರ್ವನಿಯೋಜಿತ ಸಂಚು. ಫಿಲ್ಮ್ ಸ್ಟೈಲ್‌ನಲ್ಲಿ ಎಂಟ್ರಿ ಕೊಟ್ಟ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗರು ಬಾರ್‌ಗಳಿಂದ ಸೋಡಾ ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಎಸೆದಿದ್ದಾರೆ ಎಂದು ನೇರ ಆರೋಪ ಮಾಡಿದರು.

SRIRAMULU ALLEGES CONGRESS

ಘಟನೆಯಲ್ಲಿ ಮೃತಪಟ್ಟ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್ ಅವರ​ ಮೃತದೇಹವನ್ನು ಸಂಪ್ರದಾಯದ ಪ್ರಕಾರ ಮಣ್ಣು ಮಾಡಬೇಕಿತ್ತು. ಆದರೆ, ಯಾರದ್ದೋ ಒತ್ತಾಯಕ್ಕೆ ಮಣಿದು ಸುಟ್ಟು ಹಾಕಿದ್ದಾರೆ. ಸಾಕ್ಷಿ ನಾಶ ಮಾಡಬೇಕು ಅಂತ ವ್ಯವಸ್ಥಿತವಾಗಿ ಸುಟ್ಟು ಹಾಕಲಾಗಿದೆ. ಅವರ ಕುಟುಂಬಸ್ಥರನ್ನು ಪೊಲೀಸರು ಹೆದರಿಸಿ, ಬೆದರಿಸಿದ್ದಾರೆ. ಏಕೆ ಸುಟ್ಟು ಹಾಕಿದರು ಎಂಬ ಬಗ್ಗೆ ಗೊತ್ತಿಲ್ಲ. ಆದರೆ, ಇಂದಲ್ಲ ನಾಳೆ ಈ ಸತ್ಯ ಹೊರಗೆ ಬರುತ್ತೆ ಎಂದಿದ್ದಾರೆ ಎಂದರು.

ರಾಜಶೇಖರ ತಂದೆ ಮಣ್ಣು ಮಾಡಿದ ಪೋಟೋ ಪ್ರದರ್ಶನ ಮಾಡಿದ ಶ್ರೀ ರಾಮುಲು, ರಾಜಶೇಖರ ಅವರ ಅಂತ್ಯ ಸಂಸ್ಕಾರಕ್ಕೆ ಮೊದಲು ನೆಲ ಅಗೆಯಲಾಗಿತ್ತು. ಆತನ ತಂದೆ ಸುರೇಂದ್ರ ರೆಡ್ಡಿ ಅವರ ಸಮಾಧಿ ಪಕ್ಕದಲ್ಲೇ ನೆಲ ಅಗೆಯಲಾಗಿತ್ತು. ಆದರೆ, ಸಾಕ್ಷಿ ಸಿಗಬಾರದು ಎಂದು ರಾಜಶೇಖರ ಮೃತದೇಹವನ್ನು ಹೀಗೆ ದಹನ ಮಾಡಿದ್ದಾರೆ. ನೆಲ ಅಗೆದು ಅಂತ್ಯ ಸಂಸ್ಕಾರ ಮಾಡದೇ ದಹನ ಮಾಡಿದ್ದು ಯಾಕೆ? ಕುಟುಂಬ ಸದಸ್ಯರು ಪರಿಪರಿಯಾಗಿ ಬೇಡುಕೊಂಡ್ರು ಸಹ ಮೃತದೇಹವನ್ನು ಸುಟ್ಟು ಹಾಕಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ