Breaking News

ಬಂಜಾರಾ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿ ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ

Spread the love

ಬಂಜಾರಾ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿ
ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ
ಬೆಳಗಾವಿ ನಗರದ ಸಂಗಮೇಶ್ವರ ನಗರದಲ್ಲಿರುವ ಮಹಾನಗರ ಪಾಲಿಕೆಯ 14 ಗುಂಟೆ ಜಾಗವನ್ನು ಬಂಜಾರಾ ಸಮುದಾಯದ ಭವನ ನಿರ್ಮಾಣಕ್ಕಾಗಿ ಮಂಜೂರು ಮಾಡಬೇಕೆಂದು ಸಮಾಜದ ಮುಖಂಡರು ಬೆಳಗಾವಿ ಮಹಾಪೌರ ಮಂಗೇಶ್ ಪವಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಳಗಾವಿ ಉತ್ತರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ರಿಂದ 30 ಸಾವಿರದಷ್ಟು ಬಂಜಾರಾ ಸಮುದಾಯದ ಜನಸಂಖ್ಯೆ ಇದ್ದು, ಕಳೆದ ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆ ಇದೇ ಜಾಗದಲ್ಲಿ ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ
ನಿಗಮದ 3 ಕೋಟಿ ರೂ. ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ಅನುದಾನವು ಮರಳಿ ಸರ್ಕಾರಕ್ಕೆ ಜಮೆಯಾಗಿರುವುದು ಸಮುದಾಯಕ್ಕೆ ಅನ್ಯಾಯವಾದಂತಾಗಿದೆ. ಬೆಳಗಾವಿ ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಬಂಜಾರಾ ಕುಟುಂಬಗಳಿಗೆ ಯಾವುದೇ ಸರ್ಕಾರಿ ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಸಮುದಾಯಕ್ಕೆ ಸ್ವಂತ ಭವನದ ಅವಶ್ಯಕತೆ ಹೆಚ್ಚಿದೆ. ಆದ್ದರಿಂದ, ಈ ಹಿಂದೆ ಗುರುತಿಸಲಾದ 14 ಗುಂಟೆ ನಿವೇಶನವನ್ನು ಅಧಿಕೃತವಾಗಿ ಬಂಜಾರಾ ಸಮಾಜಕ್ಕೆ ಹಸ್ತಾಂತರಿಸಬೇಕು. ಈ ಮೂಲಕ ಸ್ಥಗಿತಗೊಂಡಿರುವ ಯೋಜನೆಯನ್ನು ಪುನರಾರಂಭಿಸಿ, ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಸಂಬಂಧಿಸಿದ ದಾಖಲೆಗಳೊಂದಿಗೆ ಸಮಾಜದ ವತಿಯಿಂದ ಪಾಲಿಕೆಗೆ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಶಿವಾನಂದ ಚವ್ಹಾಣ್, ಶರತ್ ಪೋವಾರ್, ಪ್ರಕಾಶ್ ರಾಠೋಢ್, ಸುರೇಶ್ ಲಮಾಣಿ, ಲೋಕೇಶ್ ರಾಠೋಢ್, ಅರ್ಜುನ ರಾಠೋಢ್ ಇನ್ನುಳಿದವರು ಭಾಗಿಯಾಗಿದ್ಧರು.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ