ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ವಿವಸ್ತ್ರಗೊಳಿಸಿ ಬಂಧನ ಆರೋಪ…ಧಾರವಾಡ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಆಕ್ರೋಶ.
– ಹುಬ್ಬಳ್ಳಿ ಕೇಶ್ವಾಪುರ ಠಾಣೆಯ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರಗೊಳ್ಳಿಸಿ ಬಂಧಿಸಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಮಹಿಳಾ ಸೇರಿ ಪುರುಷ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಒಳ ನುಗ್ಗಲು ಯತ್ನಿಸಿ ಆಕ್ರೋಶ ಹೊರಹಾಕಿದರು.
ನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ಡಿಸಿಯವರೇ ಬಂದು ಮನವಿ ಸ್ವೀಕರಿಸಲು ಪಟ್ಟು ಹಿಡಿದರು. ಡಿಸಿಯವರು ಬಾರದೇ ಇದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು,
ಡಿಸಿ ಕಚೇರಿ ಮುಂಭಾಗದಲ್ಲಿದ್ದ ಬ್ಯಾರೇಕೆಡ್ ಸರಿಸಿ ಕಚೇರಿ ಒಳಗೆ ನುಗ್ಗಲು ಯತ್ನಿಸಿದರು. ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಹಿಳೆಯರ ವಿಚಾರದಲ್ಲಿ ಬಹಳ ಹಗುರವಾಗಿ ನಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯನವರೇ ಸ್ವತಃ ಮಹಿಳಾ ರಾಷ್ಟ್ರಪತಿ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಗ್ಯಾರಂಟಿ ಕೊಟ್ಟಿದ್ದೇವೆ ಅಹಂಕಾರದಲ್ಲಿ ಮಹಿಳೆಯರನ್ನು ತುಚ್ಚವಾಗಿ ಈ ಸರ್ಕಾರ ಕಾಣುತ್ತಿದೆ.
ಈಗ ಪೊಲೀಸರು ಮಹಿಳೆಯರೊಂದಿಗೆ ಹಗುರವಾಗಿ ನಡೆದುಕೊಳ್ಳುತ್ತಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರೆಯಷ್ಟೇ ಅಲ್ಲ, ಅನೇಕ ಸಾರ್ವಜನಿಕರ ವಿಚಾರದಲ್ಲಿ ಪೊಲೀಸರು ಮಹಿಳೆಯರೊಂದಿಗೆ ದುರವರ್ತನೆ ಉದಾಹರಣೆಗಳು ಬಂದಿವೆ. ಈ ಕೂಡಲೇ ವಿವಸ್ತ್ರಗೊಳಿಸಿ ಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಅಮಾನತು ಮಾಡಬೇಕು. ಜತೆಗೆ ಪಾಲಿಕೆ ಕಾಂಗ್ರೆಸ್ ಸದಸ್ಯ ಸುವರ್ಣ ಕಲಕುಂಟ್ಲ ಅವರನ್ನು ಬಂಧಿಸುವಂತೆ ಎಂದು ಆಗ್ರಹಿಸಿದರು.
Laxmi News 24×7