ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಅಮಿತಾಬ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ. ನಮ್ಮ ಕುಟುಂಬದವರು ಹಾಗೂ ಸಿಬ್ಬಂದಿಯನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಕಳೆದ 10 ದಿನಗಳಿಂದ ನನ್ನ ಜೊತೆ ಯಾರ್ಯಾರು ಸಂಪರ್ಕದಲ್ಲಿದಿರೋ ಅವರೆಲ್ಲರೂ ದಯವಿಟ್ಟು ಸ್ವಯಂ ಪ್ರೇರಿತವಾಗಿ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ ಎಂದು ಬರೆದಿದ್ದಾರೆ. ಬಿಗ್ ಬಿಗೆ ಹೇಗೆ ಕೊರೊನಾ ತಗುಲಿತು ಎಂಬುದೇ ಆಶ್ಚರ್ಯವಾಗಿದ್ದು, ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮಿತಾಬ್ ಅವರ ಅಭಿನಯದ ಗುಲಾಬೋ ಸಿತಾಬೋ ಸಿನಿಮಾ ಇತ್ತೀಚೆಗಷ್ಟೇ ಓಟಿಟಿ ಪ್ಲಾಟ್‍ಫಾರ್ಮ್‍ನಲ್ಲಿ ಬಿಡುಗಡೆಯಾಗಿತ್ತು. ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆ ಆನ್‍ಲೈನ್ ವೇದಿಕೆಯಲ್ಲಿ ಸಿನಿಮಾ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.