Breaking News

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the love

ಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.

ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡು ತಮ್ಮ ಜಮೀನಿಗೆ ಪರಿಹಾರ ವಿತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಮಾರಪ್ಪ ಗಾರ್ಡನ್ ನಿವಾಸಿ ಚಂದ್ರಿಕಾ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ ನ್ಯಾ.ಡಿ.ಕೆ.ಸಿಂಗ್ ಮತ್ತು ನ್ಯಾ.ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಬಿಎಂಐಎಸಿ ಯೋಜನೆಯಡಿ ಯೋಜನಾ ನಿರ್ಮಾಣಕಾರರು ಫೆರಿಫೆರಲ್ (ಬಾಹ್ಯ) ರಸ್ತೆಗಳು ಮತ್ತು ಟೋಲ್ ಪ್ಲಾಜಾಗಳನ್ನು ನಿರ್ಮಿಸುವ ಮೂಲಕ ಭಾರಿ ಸುಂಕ ಸಂಗ್ರಹಿಸುತ್ತಿದ್ದಾರೆ. ಆದಾಗ್ಯೂ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಮತ್ತು ಮೂಲಸೌಕರ್ಯ ಕಾರಿಡಾರ್ ಕೇವಲ ಕಾಗದಗಳಲ್ಲಿ ಮಾತ್ರ ಉಳಿದಿದೆ. ಯೋಜನಾ ನಿರ್ಮಾಣ ಮಾಡಬೇಕಿರುವವರು ದೊಡ್ಡ ಪ್ರಮಾಣದಲ್ಲಿ ಭೂಮಿಯನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದಾರೆ.

ಆದರೆ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಿಸಿಲ್ಲ. ಭವಿಷ್ಯದಲ್ಲಿ ಅದನ್ನು ನಿರ್ಮಿಸುವ ಯಾವುದೇ ಸೂಚನೆಯಿಲ್ಲ. ಅದಕ್ಕೆ ಕಾರಣ ಭೂಮಿ ಸರಿಯಾಗಿ ಬಳಕೆಯಾಗಿಲ್ಲ. ಆದ್ದರಿಂದ, ಯೋಜನೆಯನ್ನು ಮರುಪರಿಶೀಲಿಸಬೇಕು ಮತ್ತು ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ