ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವಿವಿಧ ಕಡೆ ಅಕ್ರಮ ಡ್ರಗ್ಸ್ ಮಾರಾಟಕ್ಕೆಂದು ಆಗಮಿಸಿ ನಗರದಲ್ಲೇ ನೆಲೆಯೂರಿದ್ದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಜಹಿದುಲ್ ಇಸ್ಲಾಂ(35) ಮತ್ತು ಫೈರೋಡ್ಸ್(32) ಬಂಧಿತರು. ಇವರು ಎರಡು ವರ್ಷಗಳ ಹಿಂದೆ ಹೆಬ್ಬಗೋಡಿ ಭಾಗದಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳದ ಮೂಲಕ ಭಾರತ ಪ್ರವೇಶಿಸಿದ ಈ ಆರೋಪಿಗಳು ಬೆಂಗಳೂರಿಗೆ ಬಂದು ವಾಸವಾಗಿದ್ದರು ಎಂಬ ಸಂಗತಿ ಪೊಲೀಸ್ ವಿಚಾರಣೆಯಲ್ಲಿ ತಿಳಿದು ಬಂದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಈ ಅಕ್ರಮ ವಾಸಿಗಳು, ನಗರದಲ್ಲಿ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳು ನಿಷೇಧಿತ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿರುವ ಬಗ್ಗೆ ಒಂದು ವಾರದಲ್ಲಿ ಒಟ್ಟು ಆರು ಎಫ್ಐಆರ್ ದಾಖಲಾಗಿವೆ. ಸುಮಾರು 15ಕ್ಕೂ ಹೆಚ್ಚು ಅಕ್ರಮವಾಸಿಗಳಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Laxmi News 24×7