Breaking News

ನಕಲಿ ಆಧಾರ್‌ ಕಾರ್ಡ್ ನೀಡಿ ಪಡೆದ ಪಾಸ್‌ಪೋರ್ಟ್‌ ಬಳಸಿ 5 ಬಾರಿ ಬಾಂಗ್ಲಾ ಪ್ರಯಾಣ: ಜಾಮೀನು ನಿರಾಕರಿಸಿದ ಹೈಕೋರ್ಟ್‌

Spread the love

ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಸಲ್ಲಿಸಿ ಪಡೆದುಕೊಂಡಿದ್ದ ಪಾಸ್ಪೋರ್ಟ್(Passport) ಬಳಸಿ ಐದು ಬಾರಿ ಬಾಂಗ್ಲಾದೇಶಕ್ಕೆ ಪ್ರಯಾಣ ಮಾಡಿ ಮಾನವ ಕಳ್ಳಸಾಗಣೆ ಆರೋಪದಲ್ಲಿ ಬಂಧಿತನಾಗಿರುವ ಬಾಂಗ್ಲಾ ದೇಶದ ಪ್ರಜೆಯೊಬ್ಬನಿಗೆ ಜಾಮೀನು ನೀಡಲು ಹೈಕೋರ್ಟ್‌ ಸೋಮವಾರ ನಿರಾಕರಿಸಿ ಆದೇಶಿಸಿತು.

ತಾನು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಎನ್ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಾಂಗ್ಲಾದೇಶದ ಪ್ರಜೆಯಾಗಿರುವ ಸದ್ಯ ಅಸ್ಸಾಂನ ವಿಳಾಸ ಹೊಂದಿರುವ ಅಮೋಲ್ ಚಂದ್ರ ದಾಸ್ ಅಲಿಯಾಸ್ ಸುಜೀಬ್ ಎಂಬವರು ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಹಾಗೂ ನ್ಯಾ.ವೆಂಕಟೇಶ್ ನಾಯ್ಕ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಕ್ರಿಮಿನಲ್‌ ಮೇಲ್ಮನವಿ ಅರ್ಜಿ ಸಲ್ಲಿಸಿರುವವರು, ಬಾಂಗ್ಲಾದೇಶದ ಪ್ರಜೆಯಾಗಿದ್ದು, ದಾಖಲೆಗಳ ಪ್ರಕಾರ ಕರ್ನಾಟಕ ಮತ್ತು ಅಸ್ಸಾಂ ರಾಜ್ಯದಲ್ಲಿ ಒಂದೇ ದಿನ ಆಧಾರ್‌ ಕಾರ್ಡ್‌ ಕುರಿತ ದಾಖಲೆಗಳನ್ನು ರಚಿಸಿಕೊಂಡಿದ್ದಾರೆ ಎಂಬ ಅಂಶ ಗೊತ್ತಾಗಲಿದೆ. ಅಲ್ಲದೆ, ಆಧಾರ್‌ ಕಾರ್ಡ್‌ ಪರಿಶೀಲಿಸಿದಲ್ಲಿ ಕಾರ್ಡ್‌ಗೆ ಫೋಟೋ ಸೇರಿಸಿ ಆಧಾರ್‌ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ ಮತ್ತು ಪಾಸ್‌ಪೋರ್ಟ್‌ ಪಡೆದಿದ್ದು, ಇದೇ ದಾಖಲೆಗಳನ್ನು ಬಳಸಿ ಐದು ಬಾರಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಿದ್ದಾರೆ ಎಂಬ ಅಂಶ ಗೊತ್ತಾಗಲಿದೆ. ಅಂತಹ ಆರೋಪಿಗೆ ಜಾಮೀನು ನೀಡಿದಲ್ಲಿ ನ್ಯಾಯಾಂಗ ಪ್ರಕ್ರಿಯೆ ಎದುರಿಸದೆ ತಪ್ಪಿಸಿಕೊಳ್ಳುವ ಸಾಧ್ಯತೆಯಿರಲಿದೆ ಎಂಬ ಸರ್ಕಾರಿ ವಕೀಲರ ವಾದವನ್ನು ಪರಿಗಣಿಸಬಹುದು ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ