Breaking News

ಯಡೂರ ಶ್ರೀವೀರಭದ್ರೇಶ್ವರ ವಿಶಾಳಿ ಜಾತ್ರಾಮಹೋತ್ಸವ ಹಿನ್ನಲೆಯಲ್ಲಿ ಹರಿದು ಬಂದ ಭಕ್ತಸಾಗರ

Spread the love

ಯಡೂರ ಶ್ರೀವೀರಭದ್ರೇಶ್ವರ ವಿಶಾಳಿ ಜಾತ್ರಾಮಹೋತ್ಸವ ಹಿನ್ನಲೆಯಲ್ಲಿ ಹರಿದು ಬಂದ ಭಕ್ತಸಾಗರ
ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಶ್ರೀವೀರಭದ್ರೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಸಹಸ್ರಾರು ಭಕ್ತರು ಶ್ರೀವೀರಭದ್ರೇಶ್ವರ ದರ್ಶನ ಪಡೆದು ಪಾವನರಾದರು.
ದಕ್ಷಿಣದ ಕಾಶೀಯಂದೆ ಪ್ರಸಿದ್ದಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಶ್ರೀವೀರಭದ್ರೇಶ್ಚರ ವಿಶಾಳಿ ಜಾತ್ರಾಮಹೋತ್ಸವ ಅಂಗವಾಗಿ ಕರ್ನಾಟಕ, ಮಹಾರಾಷ್ಟ್ರದ, ಆಂಧ್ರಪ್ರದೇಶದ ಸೇರಿದಂತೆ ವಿವಿಧ ಭಾಗಗಳಿಂದ ಬಂದಂತಹ ಭಕ್ತರು ಸಾಲಿನಲ್ಲಿ ನಿಂತು ಶಾಂತಿಯುತವಾಗಿ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದರ್ಶನ ಪಡೆದು ಪಾವನರಾದರು.ಜಾತ್ರೆ ಹಿನ್ನೆಲೆಯಲ್ಲಿ ಶ್ರೀವೀರಭದ್ರೇಶ್ವರ ದೇವರಿಗೆ ಜಲಾಭೀಷೇಕ,ಕ್ಷಿರಾಭೀಷೇಕ,ಗಂಧಾಭಿಷೇಕ,ವಿಶೇಷ ಅಲಂಕಾರ, ಪೂಜೆ,ನೈವ್ಯದ್ಯ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಮಾಡಲಾಯಿತು.ಹಾಗೂ ಅತ್ಯಂತ ಭಕ್ತಿಭಾವದಿಂದ ಪಲ್ಲಕಿಯ ಸೇವೆಯು ಕೂಡಾ ನಡೆಯಿತು.
ಮಂಜಾಗ್ರತಾ ಕ್ರಮವಾಗಿ ದೇವಸ್ಥಾನದಲ್ಲಿ ಹಾಗೂ ಯಡೂರ ಗ್ರಾಮದ ಸುತ್ತಮುತ್ತಲಿನಲ್ಲಿ ಪೊಲೀಸ್ ಹಾಗೂ ಎನ್.ಸಿ.ಸಿ,ಎನ್ ಎಸ್.ಎಸ್‌ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು.
ಭಕ್ತರಿಗೆ ದೇವಸ್ಥಾನ ಹಿಂಭಾಗದಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡಾ ಲಿಂಗೈಕ್ಯ ಚಕ್ರವರ್ತಿ ಅನ್ನದಾನೇಶ್ವರ ಶ್ರೀಗಳ ಬಂಡಿಗಣಿಯ ಬಸವಗೋಪಾಲ ನೀಲಮಾಣಿಕ ಮಠದಿಂದ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ