Breaking News

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್.

Spread the love

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್.
– ಜನವರಿ 24ರಂದು ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
 ನಗರದಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜತೆಗೆ ಯಾವುದೇ ಅವ್ಯವಸ್ಥೆ ಉಂಟಾಗದಂತೆ ಎಚ್ಚರಿಕೆ ವಹಿಸಿ, ಬಸ್ ವ್ಯವಸ್ಥೆ, ಸಂಚಾರಿ ಮಾರ್ಗ ಬದಲಾವಣೆ ಸೇರಿದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವಂತೆ ಕ್ರಮ ವಹಿಸಬೇಕು ಎಂದರು.
ಇನ್ನೂ ಸಭೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಎಚ್.ಎಫ್. ಜಕ್ಕಪ್ಪನವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ಜಿಪಂ ಸಿಇಓ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಎಸ್ಪಿ ಗುಂಜನ್ ಆರ್ಯ ಸೇರಿದಂತೆ ಇತರರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ