ಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ ಆವರಣದಲ್ಲಿ ತಡರಾತ್ರಿ ನಡೆದಿದೆ.
ಕೊಪ್ಪಳ ಜಿಲ್ಲೆ ಕವಲೂರು ಮೂಲದ ಅಯಾನ್ ಸುಂಕದ (17)ಮೃತಪಟ್ಟ ವಿದ್ಯಾರ್ಥಿ. ಸನಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ನ ಸೈನ್ಸ್ ವಿಭಾಗದಲ್ಲಿ ಅಯಾನ್ ಸುಂಕದ ವಿದ್ಯಾಭ್ಯಾಸ ಮಾಡುತ್ತಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡಿಕೊಂಡು ಕಾಲೇಜಿನ ಹಾಸ್ಟೆಲ್ನಲ್ಲಿಯೇ ವಾಸವಾಗಿದ್ದ. ಆದರೆ, ತಡರಾತ್ರಿ ಸನಾ ಶಾಹೀನ್ ಕಾಲೇಜಿನ 04ನೇ ಹಂತದ ಟೇರಸ್ ಮೇಲಿಂದ ಕೆಳಗಡೆಗೆ ಬಿದ್ದು, ಗಾಯಗೊಂಡಿದ್ದ. ಕೂಡಲೇ ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಸನಾ ಶಾಹೀನ್ ಕಾಲೇಜಿನ ಆಡಳಿತ ಮಂಡಳಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಹಾಗೂ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಇದೀಗ ಕಾಲೇಜಿನ ನಿರ್ಲಕ್ಷತನದಿಂದಾಗಿ ಸಾವು ಸಂಭವಿಸಿದೆ ಎಂಬುದಾಗಿ ಹುಬ್ಬಳ್ಳಿ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Laxmi News 24×7