Breaking News

ಯಾವ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ: ಗೃಹ ಸಚಿವ ಪರಮೇಶ್ವರ್​

Spread the love

ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಕೆ.ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದೆ. ಯಾವುದೇ ಇಲಾಖೆಯಲ್ಲಿಯೂ ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಗೃಹ ಸಚಿವರು ಪ್ರತಿಕ್ರಿಯಿಸಿದರು.

ಈ ರೀತಿ ವಿಡಿಯೋ ವೈರಲ್ ಆಗುತ್ತಿರುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಇಂಥದ್ದೆಲ್ಲ ಯಾವುದೇ ಇಲಾಖೆಯಲ್ಲಿಯೂ ಆಗಬಾರದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶಿಸಲಾಗಿದೆ. ಇದು ಸುಳ್ಳು ವಿಡಿಯೋ ಎಂದು ರಾಮಚಂದ್ರರಾವ್ ಹೇಳಿದ್ದನ್ನು ಗಮನಿಸಿದ್ದೇನೆ. ಅಂಥದ್ದೇನಾದಾರೂ ಇದ್ದರೆ ತನಿಖೆಯಲ್ಲಿ ತಿಳಿಯಲಿದೆ. ಆದರೆ ಮೇಲ್ನೋಟಕ್ಕೆ ಇಂಥ ವಿಚಾರಗಳು ಯಾರಿಗೂ ಶೋಭೆಯಲ್ಲ ಎಂದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ