Breaking News

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

Spread the love

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಹಾಸಭಾದ ಕಚೇರಿಯಲ್ಲಿ ಇಂದು ನಡೆದ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಆಯ್ಕೆ ಮಾಡಲು ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಡಿಜಿಪಿ ಶಂಕರ ಬಿದರಿ ತಿಳಿಸಿದ್ದಾರೆ.

ವೀರಶೈವ – ಲಿಂಗಾಯತ” ಒಂದೇ: ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದರು.

ವೀರಶೈವ ಮತ್ತು ಲಿಂಗಾಯತ ಎರಡೂ ಬೇರೆ ಬೇರೆಯಲ್ಲ. ಒಂದೇ ಸಮುದಾಯ ಎನ್ನುವುದು ತಮ್ಮ ಪ್ರತಿಪಾದನೆಯಾಗಿದೆ. ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ