Breaking News

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

Spread the love

ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ (Temple) ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ.
ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ.
ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ. ಬೇರೆ ಕಡೆ ನಿವೇಶನ ನೀಡಿದರೆ ಮಾತ್ರ ಸ್ಥಳಾಂತರಗೊಳ್ಳುತ್ತೇವೆ, ಇಲ್ಲವಾದರೆ ಸ್ಥಳಾಂತರವಾಗುವುದಿಲ್ಲ ಎಂದು ಕುಟುಂಬ ತಿಳಿಸಿದೆ.

Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ