Breaking News

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love

ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ನಾಲ್ವರಿಗೆ ಕಠಿಣ ಶಿಕ್ಷೆ!!!ಇಬ್ಬರಿಗೆ ಜೀವಾವಧಿ, ಉಳಿದಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಕಳೆದ ವರ್ಷದ ಮೇ ನಲ್ಲಿ ನಗರದ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗ್ಯಾಂಗ್ ರೇಪ್ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು, ನಾಲ್ವರು ಅತ್ಯಾಚಾರಿಗಳಿಗೆ 20 ವರ್ಷ ಕಾರಾಗೃಹ ಕಠಿಣ ಶಿಕ್ಷೆಯನ್ನು ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಗಾಂಧಿನಗರದ ಸಾಕೀಬ್‌ಬೇಗ್ ಫಯಾಜ್ ನಿಜಾಮಿ (22) ಮತ್ತು ಉದ್ಯಮಬಾಗದ ರವಿ ಸಿದ್ದಪ್ಪ ನಾಯ್ಕಡಿ (34) ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 8.76 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಈ ಆರೋಪಿಗಳು 2025ರ ಮೇ ತಿಂಗಳಲ್ಲಿ ಬಾಲಕಿಯನ್ನು ಪುಸಲಾಯಿಸಿ ಸಾವಗಾಂವ್ ರಸ್ತೆಯ ಫಾರ್ಮ್‌ಹೌಸ್‌ಗೆ ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದರು. ಅಲ್ಲದೆ ಬಾಲಕಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ದೌರ್ಜನ್ಯ ಎಸಗಿದ್ದರು. ಈ ಅಪರಾಧ ಕೃತ್ಯಕ್ಕೆ ಸಾಥ್ ನೀಡಿದ ಹಾಗೂ ಫಾರ್ಮ್‌ಹೌಸ್ ಬಾಡಿಗೆಗೆ ನೀಡಿ ಸಹಕರಿಸಿದ ರೋಹನ್ ರಾಜೇಶಕುಮಾರ್ ಪಾಟೀಲ (23) ಮತ್ತು ಅಶುತೋಷ್ ಮಾರುತಿ ಪಾಟೀಲ (25) ಎಂಬುವವರಿಗೂ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ಇವರಿಬ್ಬರಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 6 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಆದೇಶ ಹೊರಡಿಸಿದ್ದಾರೆ. ದಂಡದ ಮೊತ್ತದ ಜೊತೆಗೆ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 10 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಒದಗಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ.
ಈ ಸಂವೇದನಾಶೀಲ ಪ್ರಕರಣದಲ್ಲಿ ಒಟ್ಟು 17 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, 124 ದಾಖಲೆಗಳು ಹಾಗೂ 5 ಪ್ರಮುಖ ವಸ್ತುಗಳನ್ನು ಪುರಾವೆಯಾಗಿ ಪರಿಗಣಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶ್ರೀ ಎಲ್.ವಿ. ಪಾಟೀಲ ಅವರು ಸಮರ್ಥವಾಗಿ ವಾದ ಮಂಡಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾಧಿಕಾರಿಗಳಾದ ಪರಶುರಾಮ ಎಸ್. ಪೂಜೇರಿ ಹಾಗೂ ಮಹಾಂತೇಶ ಧಾಮಣ್ಣನವರ ನೇತೃತ್ವದ ತಂಡವು ಭದ್ರವಾದ ದೋಷಾರೋಪ ಪಟ್ಟಿ ಸಲ್ಲಿಸುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

Spread the love

About Laxminews 24x7

Check Also

ರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ

Spread the loveರಾಜ್ಯ ವಿದ್ಯುತ್‌ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ರಾಜ್ಯ ವಿದ್ಯುತ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ