Breaking News

ಭದ್ರಾವತಿ | ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

Spread the love

ಶಿವಮೊಗ್ಗ: ಭದ್ರವಾತಿ  ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 10ಕ್ಕೂ ಹೆಚ್ಚು ಮಕ್ಕಳಲ್ಲಿ  ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ. ಇನ್ನೂ ಊಟ ಆದ ಮೇಲೆ ನೀಡಿದ ಟಾನಿಕ್ ನಿಂದ ಮಕ್ಕಳು ಅಸ್ವಸ್ಥರಾಗದ್ದಾರೆ ಎಂದು ಹೇಳಲಾಗುತ್ತಿದೆ. ಊಟದ ಮೇಲೆ ಮಕ್ಕಳಿಗೆ ರಕ್ತ ಅಭಿವೃದ್ಧಿಗಾಗಿ ಎಫ್ ಎಕ್ಸ್ ಟಾನಿಕ್ ನೀಡಬೇಕೆಂದು ಸರ್ಕಾರದ ಆದೇಶವಿದೆ. ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಶಾಲೆಯಲ್ಲಿ ಈ ಟಾನಿಕ್‌ ನೀಡಲಾಗುತ್ತದೆ.

ಈ ಬಗ್ಗೆ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಇಲಾಖೆ ಸ್ಪಷ್ಟಪಡಿಸಬೇಕಿದೆ. ಅಸ್ವಸ್ಥಗೊಂಡ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ