Breaking News

ಆಸ್ತಿಗಾಗಿ ಕೊಲೆ ಆರೋಪ – ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವು

Spread the love

ಕೊಪ್ಪಳ: ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಮಗನೇ ತಂದೆಯನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮೃತರನ್ನು ವೆಂಕೋಬಾ ಹಂಚಿನಾಳ (50) ಎಂದು ಗುರುತಿಸಲಾಗಿದೆ. ಸೋಮವಾರ (ಜ.26) ಸಂಜೆ ತಮ್ಮ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಮೃತ ವೆಂಕೋಬಾ ಮಗನ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಆಸ್ತಿ ವಿಚಾರವಾಗಿ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿದ್ದರು. ಅದಾದ ಎರಡೇ ದಿನದಲ್ಲಿ ವೆಂಕೋಬಾ ಸಾವನ್ನಪ್ಪಿರುವುದು ಅನುಮಾನಕ್ಕೆ ಕಾರಣವಾಗಿದ್ದು, ಮಗನೇ ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಇನ್ನೂ ಈ ಸಂಬಂಧ ಮೃತನ ತಾಯಿ ಸೂರಮ್ಮ ಅವರು ದೂರು ದಾಖಲಿಸಿದ್ದಾರೆ. ಹತ್ತು ಎಕರೆ ಆಸ್ತಿ ವಿಚಾರಕ್ಕೆ ಆಗಾಗ ವೆಂಕೋಬಾ ಹಾಗೂ ಆತನ ಮಗನ ನಡುವೆ ಗಲಾಟೆಯಾಗುತ್ತಿತ್ತು. ಹೀಗಾಗಿ ತಂದೆಯನ್ನ ವಿಷ ಹಾಕಿ ಕೊಲೆ ಮಾಡಿದ್ದಾನೆ. ನನ್ನ ಮಗನ ಸಾವಿಗೆ ಸೊಸೆ, ಮೊಮ್ಮಗ ಹಾಗೂ ಮೊಮ್ಮಗನ ಹೆಂಡತಿ ಕಾರಣ ಎಂದು ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ

Spread the love ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ