Breaking News

ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

Spread the love

ಚಾಮರಾಜನಗರ: ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ಆದರೂ ಧೈರ್ಯದಿಂದ ಪ್ರತಿರೋಧ ತೋರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು, ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು

Spread the loveನವದೆಹಲಿ: 2027 ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 6.8%-7.2% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಆರ್ಥಿಕ ಸಮೀಕ್ಷೆ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ