ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ ರಾಯ್ ಅವರು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಶೋಕ್ ನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್‌ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಎದೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಆನೇಕಲ್‌ನ ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಶೋಕ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಡಿಸೆಂಬರ್ 6ರಂದು ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳ ವಿಚಾರಣೆ ನಡೆಯುತ್ತಿತ್ತು. ಇಂದು ಬೆಳಿಗ್ಗೆ ಸಹ ಐಟಿ ಅಧಿಕಾರಿಗಳು ಒಂದು ಗಂಟೆಗಳ ಕಾಲ ರಾಯ್ ಅವರನ್ನು ವಿಚಾರಣೆ ನಡೆಸಿದ್ದರು. ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದ ರಾಯ್ ಅವರು ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ತಮ್ಮ ಕ್ಯಾಬಿನ್‌ನಲ್ಲಿ ಪಿಸ್ತೂಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ತಕ್ಷಣ ಕಚೇರಿಯ ಸಿಬ್ಬಂದಿ ರಾಯ್ ಅವರನ್ನು ಹೆಚ್ಎಸ್ಆರ್ ಲೇಔಟ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ.
Laxmi News 24×7