Breaking News

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

Spread the love

ನವದೆಹಲಿ: ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಅಂತ ಸುಪ್ರೀಂ ಕೋರ್ಟ್  ಹೇಳಿದೆ. ಅಲ್ಲದೇ, ಖಾಸಗಿ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು  ಒದಗಿಸಬೇಕು ಅಂತ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ  ಪ್ರತ್ಯೇಕ ಶೌಚಾಲಯಗಳು ಇರಬೇಕು. ಈ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಖಚಿತಪಡಿಸಿಕೊಳ್ಳಬೇಕು. ಅಲ್ಲದೇ, ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ವಿಶೇಷಚೇತನರ ಸ್ನೇಹಿ ಶೌಚಾಲಯ ಒದಗಿಸಬೇಕು ಎಂದು ಕೋರ್ಟ್ ಹೇಳಿದೆ.

ಖಾಸಗಿ ಶಾಲೆಗಳು ಈ ಸೌಲಭ್ಯ ಒದಗಿಸಲು ವಿಫಲವಾದರೇ ಮಾನ್ಯತೆ ರದ್ದುಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಲು ಸರ್ಕಾರಗಳು ವಿಫಲವಾದರೆ ಅದನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯ ಪೀಠ ಎಚ್ಚರಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಕೇಂದ್ರ ಸರ್ಕಾರ ಮುಟ್ಟಿನ ನೈರ್ಮಲ್ಯ ನೀತಿ ಜಾರಿಗೆ ತರಬೇಕು ಎಂದು ಕೋರಿ ಜಯಾ ಠಾಕೂರ್ ಅವರು ಡಿಸೆಂಬರ್ 10, 2024 ರಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ