Breaking News

ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು

Spread the love

ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಅನುಪಮ್ ಖೇರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನನ್ನ ತಾಯಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ ನನ್ನ ಸೋದರ, ಅತ್ತಿಗೆ ಮತ್ತು ಸಂಬಂಧಿಗೂ ಕೊರೊನಾ ತಗುಲಿದೆ. ಅನುಪಮ್ ಖೇರ್ ಅವರ ತಾಯಿಯನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮೂವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.ಕುಟುಂಬಸ್ಥರಿಗೆ ಪಾಸಿಟಿವ್ ದೃಢಪಟ್ಟಿದ್ದರಿಂದ ಅನುಪಮ್ ಮತ್ತು ಇತರೆ ಸದಸ್ಯರು ಸಹ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ನಾಲ್ವರು ಹೊರತುಪಡಿಸಿ ಇಬ್ಬರ ವರದಿ ನೆಗೆಟಿವ್ ಬಂದಿದೆ. ಇಬ್ಬರು ಮುನ್ನೆಚ್ಚರಿಕೆ ಕ್ರಮವಾಗಿ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ.ಇತ್ತ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.

https://youtu.be/I1U-UG-NHuk


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ