Breaking News

ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ಸಾವು

Spread the love

ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ  ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ. ರೂಮ್‌ನಲ್ಲಿ ನಾಲ್ವರು ಸಹ ಮಲಗಿದ್ದಂತೆಯೇ ಮೃತಪಟ್ಟಿದ್ದಾರೆ.

ಮುತ್ಸಂದ್ರ ಗ್ರಾಮದ ಛೋಟಾಸಾಬ್ ಎನ್ನುವವರಿಗೆ ಸೇರಿದ ಲೇಬರ್ ಶೆಡ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಅಸ್ಸಾಂ ರಾಜ್ಯದ ಮೂಲದವರು. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ