ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದ ಕಿಶೋರ್ ಸಾಳ್ವೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸುವಂತೆ ಸೂಚನೆ ໖໖.
ಈ ಪ್ರಕರಣದ ದೂರುದಾರ ಉದ್ಯಮಿ ಸಂದೀಪ್ ಪಾಟೀಲ್ ಅವರ ಅಪಹರಣ ಮತ್ತು ₹400 ಕೋಟಿ ದರೋಡೆಗೆ ಸಂಬಂಧಿಸಿದ ಎಲ್ಲಾ ಅಂಶಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ಸಮಗ್ರ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ಒಳಪಡಿಸಿದೆ.
ಇದರ ನಡುವೆ, ಎಸ್‌ಐಟಿ ತನಿಖೆಯ ಪಾರದರ್ಶಕತೆ ಕುರಿತು ದೂರುದಾರ ಸಂದೀಪ್ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ತನಿಖೆ ಏಕಪಕ್ಷೀಯವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಕರ್ನಾಟಕದಲ್ಲಿ ದೂರು ದಾಖಲಿಸುವ ಕುರಿತು ಅವರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಂದಿತ್ತು.
2025ರ ಅಕ್ಟೋಬರ್ 25ರಂದು ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಿಂದ ಸುಮಾರು 400 ಕೋಟಿ ಹಣ ದರೋಡೆಯಾಗಿತ್ತು. ಈ ಹಣದಲ್ಲಿ ರದ್ದಾದ 2,000 ಮುಖಬೆಲೆಯ ನೋಟುಗಳೂ ಸೇರಿದ್ದವು ಎನ್ನಲಾಗಿದೆ. ಪ್ರಮುಖ ಆರೋಪಿ ಬಂಧನದ ಬೆನ್ನಲ್ಲೇ ಪ್ರಕರಣದಲ್ಲಿ ಇನ್ನಷ್ಟು ಸತ್ಯಾಂಶಗಳು ಬಹಿರಂಗವಾಗುವ ನಿರೀಕ್ಷೆಯಿದೆ.
Laxmi News 24×7