Breaking News

ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

Spread the love

ಬಾಗಲಕೋಟೆ: ತಾಯಿಯೊಬ್ಬಳು  ಭಾನುವಾರ ಮೂರು ಮಕ್ಕಳಿಗೆ ನೇಣು ಹಾಕಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ  ಯತ್ನಿಸಿದ ಘಟನೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.

ರೂಪಾ ಹನುಮಂತ ಗೌಡರ (28) ಕೃತ್ಯ ಎಸಗಿದ ತಾಯಿ. ಸಮೃದ್ಧಿ ಹನುಮಂತಪ್ಪ ಗೌಡರ (5), ಪ್ರೀತಂ ಹನುಮಂತಪ್ಪ ಗೌಡರ (4), ಸುಕ್ಷೀತ ಹನುಮಂತಪ್ಪ ಗೌಡರ (2) ಮೃತ ಮಕ್ಕಳು. ಮೂವರು ಮಕ್ಕಳನ್ನು ಮನೆಯಲ್ಲಿಯೇ ನೇಣು ಹಾಕಿ ಸಾಯಿಸಿದ್ದಾಳೆ.

ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ರೂಪಾ ವಿಷ ಸೇವಿಸಿದ್ದು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೂಪಾ ಆರೋಗ್ಯ ಚೇತರಿಕೆ ಕಂಡಿದೆ.

ಮನೆಯಲ್ಲಿ ಅತ್ತೆ ಸೊಸೆ ನಡುವೆ ನಡೆದ ಜಗಳವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ರೂಪಾ ಗೌಡರ್ ಮೇಲೆ ಕೊಲೆ ಕೇಸ್‌ ದಾಖಲಾದರೆ ಅತ್ತೆ ರೇಣವ್ವಳ‌ ಮೇಲೆ ಕಿರುಕುಳ ಆರೋಪದ ದೂರು ದಾಖಲಾಗಿದೆ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ