Breaking News

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು

Spread the love

ಬೆಂಗಳೂರು: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ಭಾರತಿನಗರದ  ಫ್ರೂಟ್ಸ್ ಮಾರ್ಕೆಟ್ ಬಳಿ ನಡೆದಿದೆ.

ಇರ್ಫಾನ್ ಮುಲ್ಲಾನಿ (26) ಮೃತ ವ್ಯಕ್ತಿ. ಜನವರಿ 30ರಂದು ಘಟನೆ ನಡೆದಿದೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಯಾರಾದರು ಮೇಲಿಂದ ತಳ್ಳಿದ್ರಾ ಅನ್ನೋ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾರತಿನಗರ ಪೊಲೀಸರು ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

Spread the loveಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ