Breaking News

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Spread the love

ಬೆಂಗಳೂರು: ಗುತ್ತಿಗೆದಾರರಿಂದ ಕಮಿಷನ್‌ ಪಡೆದ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ಜಗನ್ನಾಥ್ ಶೇಗಜಿ ಮತ್ತು ನಿರ್ದೇಶಕ ಚಿಂಚಳಿ  ಅವರನ್ನು ಅಮಾನತು ಮಾಡಲಾಗಿದೆ.

ಸಣ್ಣ ಗುತ್ತಿಗೆದಾರರಿಂದ 3%ವರೆಗೆ ಕಮಿಷನ್ ಕೇಳುವ ಆಡಿಯೋ ವೈರಲ್ ಆದ ಬೆನ್ನಲ್ಲೇ ಗುತ್ತಿಗೆದಾರರ ಸಂಘ ಸುದ್ದಿಗೋಷ್ಠಿ ನಡೆಸಿ ಈ ಕ್ರಮವನ್ನು ತೆಗೆದುಕೊಂಡಿದೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಇದು ಖಾಸಗಿ ಜಾಗದಲ್ಲಿ ಆಗಿರುವ ವ್ಯವಹಾರ. ಈ ಘಟನೆಗೂ ಗುತ್ತಿಗೆದಾರರ ಸಂಘಕ್ಕೂ ಸಂಬಂಧ ಇಲ್ಲ. ಯಾವ ಕಾರಣಕ್ಕೂ ನಾವು 80% ಇದೆ ಎಂದು ಹೇಳಿಲ್ಲ ಎಂದು ತಿಳಿಸಿದರು.

ಅಮಾನತು ಬಳಿಕ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಜಗನ್ನಾಥ್ ಶೇಗಜಿ, ನಾನು ಯಾವುದೇ ಕಮಿಷನ್ ಕೇಳಿಲ್ಲ. ಅಧಿಕಾರಿಗಳು ನನ್ನ ವಿರುದ್ದ ಷಡ್ಯಂತ್ರ ಮಾಡಿದ್ದಾರೆ. ನನ್ನ ಧ್ವನಿಯನ್ನ ಹತ್ತಿಕ್ಕಲು ಈ ರೀತಿ ಮಾಡಿದ್ದಾರೆ ಎಂದು ದೂರಿದ್ದಾರೆ.


Spread the love

About Laxminews 24x7

Check Also

ಸಿಂಗದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ ಶಿಷ್ಟಾಚಾರ ಉಲ್ಲಂಘಿಸಿ ಆಯೋಜಿಸಲಾಗಿದೆ’: ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Spread the love ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಹಾಗೂ ವಿವಿಧ ಯೋಜನೆಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ