Breaking News

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Spread the love

ಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ.

ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ