Breaking News

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Spread the love

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.

ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ದಿನಾಂಕ ಮತ್ತು ಫಲಿತಾಂಶದ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿಯೇ ಪ್ರಕಟಿಸಿರುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಳತೆ ತಂದಿದೆ. ಇದರಿಂದ ವಿದ್ಯಾರ್ಥಿಗಳು ತಮ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ಮತ್ತು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಹಕಾರಿಯಾಗಲಿದೆ.

ಮಾರ್ಚ್‌ 5ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ 30ರಂದು ತೃತೀಯ ಭಾಷಾ ವಿಷಯಗಳೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

 

 

ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಮುಗಿದ ತಕ್ಷಣವೇ ಏಪ್ರಿಲ್‌ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಇದು ಮುಂದಿನ ತರಗತಿಗಳ ಪ್ರವೇಶ ಪ್ರಕ್ರಿಯೆಗೆ ಅನುಕೂಲವಾಗಲಿದೆ.

 

 

ಪರೀಕ್ಷೆಗೆ ಕೆಲವು ದಿನಗಳ ಮುಂಚಿತವಾಗಿ ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳು ತಮ ಪ್ರವೇಶ ಪತ್ರದಲ್ಲಿರುವ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್‌, ಸಾರ್ಟ್‌ ವಾಚ್‌, ಎಲೆಕ್ಟ್ರಾನಿಕ್‌ ಗ್ಯಾಜೆಟ್‌‍ಗಳನ್ನು ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಹಾಜರಿರಬೇಕು. ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದಿಲ್ಲ. ಪರೀಕ್ಷಾ ದಿನಾಂಕ ಹತ್ತಿರ ಬರುತ್ತಿರುವುದರಿಂದ ಮಕ್ಕಳ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ಅವರಿಗೆ ಒತ್ತಡವಿಲ್ಲದ ವಾತಾವರಣ ನಿರ್ಮಿಸಿಕೊಡಬೇಕು ಎಂದು ಮನಃಶಾಸ್ತ್ರಜ್ಞರು ಸಲಹೆ ನೀಡಿದ್ದಾರೆ.

ಪರೀಕ್ಷಾ ಭಯ ಹೋಗಲಾಡಿಸಲು ಶಿಕ್ಷಣ ಇಲಾಖೆಯು ಶೀಘ್ರದಲ್ಲೇ ಸಹಾಯವಾಣಿಯನ್ನು ಆರಂಭಿಸಲಿದೆ. ವಿದ್ಯಾರ್ಥಿಗಳು ತಮಗಿರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಈ ಸಹಾಯವಾಣಿಯನ್ನು ಬಳಸಿಕೊಳ್ಳಬಹುದಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ