Breaking News

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

Spread the love

ಬೆಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ ಬಂದಿದೆ.

ರಂಜಾನ್ ಹಿನ್ನೆಲೆ ರಾಜ್ಯದ ಉರ್ದು ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಅವಧಿ ಬದಲಾವಣೆ ಮಾಡಿ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿತ್ತು. ಈ ಅವಧಿಯಲ್ಲಿ ಬೆಳಿಗ್ಗೆ 8ಕ್ಕೆ ಶಾಲೆ ಆರಂಭ ಮಾಡಿ ಮಧ್ಯಾಹ್ನ 12:45ಕ್ಕೆ ಶಾಲೆ ಅವಧಿ ಮುಕ್ತಾಯಕ್ಕೆ ಸೂಚಿಸಿತ್ತು. 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ 2026ರ ಮಾರ್ಚ್​​ 20ರವರೆಗೆ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆ ಮಾಡಲಾಗಿತ್ತು. ಈ ನಿರ್ಧಾರವೀಗ ವಿವಾದಕ್ಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರಿಗೆ ಸುಮ್ಮನೆ ಒಂದು ತಿಂಗಳು ರಜಾ ಕೊಟ್ಟು ಬಿಡುವುದು ಒಳ್ಳೆಯದು. ರಂಜಾನ್, ದೀಪಾವಳಿ, ಗಣೇಶ ಚತುರ್ಥಿ ಬೇರೆ ಅಂತಾ ಕಾಂಗ್ರೆಸ್ ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿದೆ. ಸಿದ್ದರಾಮಯ್ಯ ಸರ್ಕಾರ ಎಲ್ಲಿ ಅವಕಾಶ ಸಿಗುತ್ತದೋ ಅಲ್ಲಿ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಕೊಡಗಿನ ಶಾಸಕ ಹಿಂದೂ ಸಮಾಜೋತ್ಸವ ಹಿನ್ನೆಲೆ ರಸ್ತೆಯಲ್ಲಿ ಹೋಗುವಾಗ ಹಿಂದೂ ಕಾರ್ಯಕರ್ತರು ಕರೆದಿದ್ದಕ್ಕೆ ಹೋಗಿ ಶಾಲು ಹಾಕಿಸಿಕೊಂಡಿದ್ದಕ್ಕೂ ಹೈಕಮಾಂಡ್​​ನಲ್ಲಿ ಚರ್ಚೆಯಾಗುತ್ತಿದೆ. ಸಮಾನತೆ ಶಬ್ದಕ್ಕೆ ಅರ್ಥವಿಲ್ಲದ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಇದು ಅತ್ಯಂತ ಹೇಯ ಕೆಲಸ ಎಂದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ