Breaking News

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Spread the love

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‌  ಪಕ್ಷಕ್ಕೆ ಕರ್ನಾಟಕವೇ ಆರ್‌ಬಿಐ ಆಗಿದೆ. ಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಬೇಕಿದೆ. ಹಾಗಾಗಿ ಸಾವಿರ ಸಾವಿರ ಕೋಟಿ ಕೇಂದ್ರ ಕಾಂಗ್ರೆಸ್‌ಗೆ ಹೋಗುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

ಅಬಕಾರಿ ಇಲಾಖೆ ಅವ್ಯವಹಾರದ  ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವ ಆರ್‌.ಬಿ ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಧರಣಿಗಿಳಿದಿದ್ದಾರೆ. ಸದನ ಮುಂದೂಡಿದರೂ ಹೊರಗೆ ಬರದೇ ವಿಪಕ್ಷಗಳ ಸದಸ್ಯರು ಒಳಗೆ ಉಳಿದಿದ್ದಾರೆ. ಪೋಸ್ಟರ್ ಹಿಡಿದು ಸದನದ ಬಾವಿಯಲ್ಲಿ ಧರಣಿ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿದ್ದಾರೆ.

ಈ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ವಿಪಕ್ಷ ನಾಯಕರು ಮಾತನಾಡಿದ್ದಾರೆ. ರಾಜ್ಯದಲ್ಲಿ ಲೂಟಿ ಸರ್ಕಾರ ಇದೆ. ರಾಜ್ಯ ಕಾಂಗ್ರೆಸ್, ಕೇಂದ್ರ ಕಾಂಗ್ರೆಸ್‌ನ ರಿಸರ್ವ್ ಬ್ಯಾಂಕ್ ಆಗಿದೆ. ಸದ್ಯದಲ್ಲೇ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಆಗಲಿದೆ. ಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಬೇಕಿದೆ. ಹಾಗಾಗಿ ಸಾವಿರ ಸಾವಿರ ಕೋಟಿ ಕೇಂದ್ರ ಕಾಂಗ್ರೆಸ್‌ಗೆ ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನಾವು ಬಿಡಲ್ಲ, ಅಬಕಾರಿ ಇಲಾಖೆ 6 ಸಾವಿರ ಕೋಟಿ ವಾಪಸ್ ಬರಬೇಕು. ಸಚಿವ ತಿಮ್ಮಾಪುರ ರಾಜೀನಾಮೆ ಕೊಡಬೇಕು. ನಮ್ಮ ಸರ್ಕಾರದಲ್ಲಿ ಹಿಂದೆ ಈ ರೀತಿ ಆದಾಗ ರಾಜೀನಾಮೆ ಕೊಟ್ಟು ತನಿಖೆಯಲ್ಲಿ ಸುಳ್ಳು ಅಂದ ಮೇಲೆ ವಾಪಸ್ ಸಚಿವ ಸ್ಥಾನ ತೆಗೆದುಕೊಂಡಿದ್ದಾರೆ. ಈಗಲೂ ಹಾಗೇ ಮಾಡಿ. ತಪ್ಪು ಮಾಡಿಲ್ಲ ಅಂದ್ರೆ ಮತ್ತೆ ವಾಪಸ್ ಬನ್ನಿ. ಸದ್ಯ ತಿಮ್ಮಾಪುರ ರಾಜೀನಾಮೆ ಕೊಡಬೇಕು. ಇಲ್ಲ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಪಟ್ಟುಹಿಡಿದಿದ್ದಾರೆ.

ಇನ್ನೂ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾತನಾಡಿ, ಸರ್ಕಾರದ ವಿರುದ್ಧ ಹೋರಾಟ ನಿಲ್ಲಲ್ಲ. ದಾಖಲೆ ಸಮೇತ ಸರ್ಕಾರದ ಮುಂದಿಟ್ಟರೂ ಸರ್ಕಾರ ಒಪ್ಪದ ಸ್ಥಿತಿಯಲ್ಲಿದೆ. ಸಿಎಂ ಈ ಹಿಂದೆ ಇದ್ದಂತೆ ಇಲ್ಲ. ಸಿಎಂ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇಂದು ಎರಡು ಪಕ್ಷದವರ ಹೋರಾಟ ಮುಂದುವರೆಯುತ್ತದೆ. ಕುಮಾರಸ್ವಾಮಿಯವರ ಅನುಪಸ್ಥಿತಿ ಕಾಡುತ್ತಿದೆ. ಅವರು ಇಲ್ಲಿ ಇದ್ದಿದ್ದರೆ ವಿಚಾರವನ್ನ ಇನ್ನೂ ಹೆಚ್ಚಿನ ಮಟ್ಟಕ್ಕೆ ತೆಗೆದುಕೊಂಡು ಹೋಗಬಹುದಿತ್ತು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ