Breaking News

ವಿಜಯಪುರ | ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ

Spread the love

ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವೀಸ್ ಸೆಂಟರ್ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಕಾರುಗಳು ಸುಟ್ಟು ಭಸ್ಮವಾಗಿವೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ