Breaking News

2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಕಾತಿ ಮೂಲಕ ಭರ್ತಿ

Spread the love

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್‌ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲನ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಟ್ಟು 2000 ಹುದ್ದೆಗಳ ಭರ್ತಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಆರ್ಥಿಕ ಇಲಾಖೆಯ ಸಲಹೆಗಳನ್ವಯ ನೇಮಕಾತಿಗೆ ಷರತ್ತು ಬದ್ಧ ಅನುಮತಿ ನೀಡಿ ಇಲಾಖೆಯ ಉಪ ಕಾರ್ಯದರ್ಶಿ ಬುಧವಾರ ಆದೇಶ ಮಾಡಿದ್ದಾರೆ.

ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಮಾತಿ ಮೂಲಕ ಭರ್ತಿ ಮಾಡಬೇಕು. ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರಿಸಿರುವ ಹುದ್ದೆಗಳನ್ನು ನಿಯಮಾನುಸಾರ ವರ್ಗೀಕರಿಸಿ ನೇಮಕಾತಿಗೆ ಕ್ರಮ ವಹಿಸಬೇಕು. ಯುವಿಸಿಇಯ 47 ಹುದ್ದೆಗಳ ಭರ್ತಿಗೆ ಮುನ್ನ ವಿವಿಯಲ್ಲಿ ಖಾಲಿ ಇರುವ 72 ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು. ನಂತರ ಸರ್ಕಾರದ ಅನುಮೋದನೆ ಪಡೆದು ಸದರಿ ಹುದ್ದೆಗಳ ಭರ್ತಿ ಮಾಡಬೇಕೆಂದು ಷರತ್ತು ವಿಧಿಸಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ