Breaking News

ಬಾಗಲಕೋಟೆ | ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ PhD ಪ್ರಮಾಣ ಪತ್ರ ಸಲ್ಲಿಕೆ ಆರೋಪ

Spread the love

ಬಾಗಲಕೋಟೆ: ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ವಿರುದ್ಧ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ  ಸಲ್ಲಿಸಿ ನೌಕರಿ ಪಡೆದ ಆರೋಪ ಕೇಳಿಬಂದಿದೆ.

ಬಾಗಲಕೋಟೆ  ಜಿಲ್ಲೆಯಲ್ಲಿರುವ 18 ಸರ್ಕಾರಿ ಕಾಲೇಜಗಳಲ್ಲಿ 100ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅದ್ರಲ್ಲಿ ಶೇ.60 ರಷ್ಟು ಅತಿಥಿ ಉಪನ್ಯಾಸಕರು ಹೊರ ರಾಜ್ಯದಿಂದ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಪಡೆದು ಕೆಲಸ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಒಂದೊಂದು ಪ್ರಮಾಣಪತ್ರಕ್ಕೆ 3-4 ಲಕ್ಷ ಹಣ ನೀಡಿ ಪ್ರಮಾಣ ಪತ್ರ ಪಡೆದ ಆರೋಪ ಇದೆ. ಜಮಖಂಡಿ, ಹುನಗುಂದ, ಮುಧೋಳ ಸೇರಿದಂತೆ ಹಲವೆಡೆ ನಕಲಿ ಪ್ರಮಾಣ ಪತ್ರ ಸಲ್ಲಿಕೆಯಾಗಿದೆ.

ಉತ್ತರಪ್ರದೇಶ ಮೂಲದ ಚೌಧರಿ ಚರಣಸಿಂಗ್ ವಿವಿ ಸೇರಿದಂತೆ ವಿವಿಧ ರಾಜ್ಯದ ನಕಲಿ ಪಿಹೆಚ್‌ಡಿ ಪ್ರಮಾಣಪತ್ರ ಸಲ್ಲಿಕೆ ಆಗಿರೋದು ಬೆಳಕಿಗೆ ಬಂದಿದೆ. ಚೌಧರಿ ಚರಣಸಿಂಗ್ ವಿವಿಯಲ್ಲಿ ಕನ್ನಡ ವಿಭಾಗವೇ ಇಲ್ಲ. ಆದರೂ ಅದರ ಹೆಸರಲ್ಲಿ ಕನ್ನಡದಲ್ಲಿ ಪಿಹೆಚ್‌ಡಿ ಪ್ರಮಾಣ ಪತ್ರ ಪಡೆದಿರೋದು ಅನುಮಾನಕ್ಕೆ ಕಾರಣವಾಗಿದೆ. ಪಿಎಚ್‌ಡಿ ಪ್ರಮಾಣ ಪತ್ರ ನೈಜತೆ ತಿಳಿಯಲು ಶಿಕ್ಷಣ ಇಲಾಖೆ ಮುಂದಾಗಿದೆ. 2024-25 2025-26 ರಲ್ಲಿ ನೇಮಕವಾದ ಅತಿಥಿ ಉಪನ್ಯಾಸಕರ ಪ್ರಮಾಣ ಪತ್ರಗಳನ್ನ ಪರಿಶೀಲಿಸಲಾಗುತ್ತಿದೆ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ