Breaking News

ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂ ನಿರ್ಧರಿಸುತ್ತಾರೆ: ಸಚಿವ ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧಾರ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಬೆಳಗಾವಿಯ ಶ್ರೀನಗರದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಬಾಲಭವನದ ಒಳಾಂಗಣ ಬಾಕ್ಸ್ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕೆಂದು ಈಗಾಗಲೇ ಹಲವು ಬಾರಿ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಆದರೆ ಈ ಕುರಿತು ಸರ್ಕಾರ, ಸಿಎಂ ಸಿದ್ದರಾಮಯ್ಯನವರೇ ಅಂತಿಮ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್ ಅನುದಾನ ಕಾಯಬೇಕಿಲ್ಲ, ಆಯಾ ಇಲಾಖೆಗಳಲ್ಲಿ ಲಭ್ಯ ಇರುವ ಅನುದಾನ ಬಳಸಿ ಅಭಿವೃದ್ಧಿ ವೇಗ ಹೆಚ್ಚಿಸಬಹುದು. ಟ್ರಾಫಿಕ್‌ ಸಮಸ್ಯೆ ಉದ್ಭವಿಸದಂತೆ ಬರುವ ದಿನಗಳಲ್ಲಿ ಅಶೋಕ ವೃತ್ತ, ಚನ್ನಮ್ಮಾ ವೃತ್ತ, ಕೊಲ್ಲಾಪುರ ವೃತ್ತವನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದ ಸಚಿವರು, ಮುಂಬರುವ ಗ್ರಾಪಂ ಚುನಾವಣೆಗಳಲ್ಲಿ ಬ್ಯಾಲೆಟ್‌ ಪೇಪರ್‌ ಬಳಸಬೇಕೆಂದು ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಹೇಳಿದರು.

ನವಿಲುತೀರ್ಥ ಜಲಾಶಯದಿಂದ ಅವಳಿ ನಗರಗಳಿಗೆ ನೀರು ಪೂರೈಸುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಕುಡಿಯುವ ನೀರಿನ ಬೇಡಿಕೆಯನ್ನು ನಿರಾಕರಿಸಲು ಸಾಧ್ಯವಿಲ್ಲ, ಹಿಪ್ಪರಗಿ ಜಲಾಶಯದಲ್ಲಿ ಸದ್ಯಕ್ಕೆ ಅಗತ್ಯವಿರುವಷ್ಟು ನೀರು ಸಂಗ್ರಹವಿದೆ ಎಂದರು.

ಸದ್ಯಕ್ಕೆ ಮಹಾರಾಷ್ಟ್ರದಿಂದ ನೀರು ಕೇಳುವ ಪರಿಸ್ಥಿತಿ ಇಲ್ಲದಿದ್ದರೂ, ಮುಂದಿನ ದಿನಗಳಲ್ಲಿ ಅವಶ್ಯಕತೆ ಬಿದ್ದಲ್ಲಿ ಪಕ್ಷಾತೀತವಾಗಿ ನೀರು ತರಲು ಶ್ರಮಿಸುವುದಾಗಿ ತಿಳಿಸಿದರು. ಇನ್ನು ಮಹಾನಗರ ಪಾಲಿಕೆಯ ಮಹಾಪೌರ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ, ಸಂಖ್ಯಾಬಲ ಯಾರ ಪರವಿದೆಯೋ ಅವರು ಅಧಿಕಾರ ನಡೆಸಲಿ ಎಂದು ಹೇಳುವ ಮೂಲಕ ಕುತೂಹಲಕ್ಕೆ ತೆರೆ ಎಳೆದರು.


Spread the love

About Laxminews 24x7

Check Also

ಶ್ರೀನಗರದಲ್ಲಿ ಹಿಂದೂ ಸಮ್ಮೇಳನ

Spread the loveಬೆಳಗಾವಿ: ಮಹಾಂತೇಶ ನಗರ, ಶ್ರೀನಗರ ಹಾಗೂ ಶಿವಬಸವ ನಗರ ಹಿಂದೂ ಸಮ್ಮೇಳನ ಸಮಿತಿಯಿಂದ ಫೆ.6ರಂದು ಸಂಜೆ 6ಕ್ಕೆ ಶ್ರೀನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ