Breaking News

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Spread the love

ಬೆಂಗಳೂರು: ‘ನಮ್ಮ ಮೆಟ್ರೋ’  ಪ್ರಯಾಣಿಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆಬಿದ್ದಿದೆ.

ನಾಳೆಯಿಂದ ಮೆಟ್ರೋ ಹೊಸ ದರ ಜಾರಿಗೆ ಬರಲ್ಲ. ದರ ಏರಿಕೆ ಇಲ್ಲ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ ಬೋರ್ಡ್ನಿಂದ ಬಿಎಂಆರ್‌ಸಿಎಲ್‌ಗೆ ಇ-ಮೇಲ್ ಸಂದೇಶ ಬಂದಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಹೇರಲು ಇ-ಮೇಲ್ ಸಂದೇಶದ ಮೂಲಕ ತಿಳಿಸಲಾಗಿದೆ. ಬೋರ್ಡ್ ಮೀಟಿಂಗ್‌ನಲ್ಲಿ ನಿರ್ಧಾರ ಮಾಡಲು ಸೂಚನೆ ನೀಡಲಾಗಿದೆ.

ಹೀಗಾಗಿ, ತಾತ್ಕಾಲಿಕವಾಗಿ ದರ ಏರಿಕೆಗೆ ತಡೆ ನೀಡಲಾಗಿದೆ ಎಂದು ‘ಪಬ್ಲಿಕ್ ಟಿವಿ’ಗೆ ಬಿಎಂಆರ್‌ಸಿಎಲ್ ಎಂಡಿ ತಿಳಿಸಿದ್ದಾರೆ.

ನಾಳೆಯಿಂದ ಶೇ.5 ರಷ್ಟು ದರ ಏರಿಕೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಸೋಮವಾರದಿಂದ ಆಗಬೇಕಿದ್ದ ಮೆಟ್ರೋ ದರ ಏರಿಕೆಗೆ ಈಗ ಬ್ರೇಕ್ ಬಿದ್ದಿದೆ.


Spread the love

About Laxminews 24x7

Check Also

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Spread the loveನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ